ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿಯೇ 1200 PSI, 12000 PC ಹುದ್ದೆಗಳ ನೇಮಕ | ಈ ಕುರಿತ ಮಾಹಿತಿ ನಿಮಗಾಗಿ

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿಯೇ 1200 PSI, 12000 PC ಹುದ್ದೆಗಳ ನೇಮಕ | ಈ ಕುರಿತ ಮಾಹಿತಿ ನಿಮಗಾಗಿ
Published by Yallamma G
29 ಜನವರಿ 2025 Karnataka State Police

ಕರ್ನಾಟಕದಲ್ಲಿನ PSI ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ 1200 ಪಿಎಸ್ಐ ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. 545 ಪಿಎಸ್‌ಐ ಹುದ್ದೆಗಳ ನೇಮಕ ಮಾಡಿಕೊಂಡು ತರಬೇತಿ ಪಡೆಯುತ್ತಿದ್ದಾರೆ, ಮುಂದಿನ ಹಂತದಲ್ಲಿ 402 PSI ಹುದ್ದೆಗಳ ನೇಮಕದ ಸಿಂಧುತ್ವ ಪ್ರಕ್ರಿಯೆ ನಡೆದಿದ್ದು ಶೀಘ್ರ ನೇಮಕಾತಿ ಆದೇಶ ನೀಡಲಾಗುವುದು, ಇದರ ಜೊತೆಗೆ 6-7 ತಿಂಗಳಲ್ಲಿ 1200 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.

- ಕರ್ನಾಟಕ ರಾಜ್ಯದಲ್ಲಿ ಸುಮಾರು 10 ರಿಂದ 12 ಸಾವಿರದಷ್ಟು ಪೋಲಿಸ್ ಸಿಬ್ಬಂದಿಗಳ ಕೊರತೆ ಇದ್ದು, ಅದನ್ನು ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

* ಈ ಕುರಿತು ಮಾನ್ಯ ಗೃಹ ಸಚಿವ ಅವರು ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ. ಅಭ್ಯರ್ಥಿಗಳು ಈಗಿನಿಂದಲ್ಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.