ಕರ್ನಾಟಕದಲ್ಲಿನ PSI ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 660 PSIಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. 545 ಪಿಎಸ್‌ಐ ಹುದ್ದೆಗಳ ಭರ್ತಿಗೆ ಮರು ಪರೀಕ್ಷೆ ಸುಗಮವಾಗಿ ನಡೆದಿದ್ದು, ಬೇಗ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಮುಂದಿನ ಹಂತದಲ್ಲಿ 403 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ. ಈ ಎರಡು ಪ್ರಕ್ರಿಯೆ ಮುಗಿದ ನಂತರ 660 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. ಈಗಾಗಲೇ ಆರ್ಥಿಕ ಇಲಾಖೆಯಿಂದ 660 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದ್ದು, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಎಲ್ಲ ಪರೀಕ್ಷೆಗಳನ್ನು KEA ನಡೆಸಿಕೊಡಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.
* ಈ ಕುರಿತು ಮಾನ್ಯ ಗೃಹ ಸಚಿವ ಅವರು ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.
Comments