Loading..!

ದಿನಾಂಕ 14, 15 ಜೂನ್ 2024 ರಂದು ರಾಯಚೂರು ಮತ್ತು ಕಲಬುರಗಿಯಲ್ಲಿ ನಡೆಯಲಿರುವ ಬೃಹತ ಉದ್ಯೋಗ ಮೇಳ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:13 ಜೂನ್ 2024
Image not found

ರಾಯಚೂರು ನಗರದ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯಿಂದ ರಾಯಚೂರುನಲ್ಲಿ ಜೂ.15ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದು, 
* ಈ ಉದ್ಯೋಗ ಮೇಳವು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜೂನ್ 15 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯ ವರೆಗೆ ನಡೆಯಲಿದೆ. 
* ಈ ಉದ್ಯೋಗದಲ್ಲಿ ಭಾಗವಹಿಸಲು ಅಭ್ಯರ್ಥಿಗಳು SSLC ಯಿಂದ ಪದವಿ ವರೆಗಿನ ಯಾವುದೇ ವಿದ್ಯಾರ್ಹತೆ ಹೊಂದಿದ್ದರೂ ಕೂಡ ಪಾಲ್ಗೊಳ್ಳಬಹುದಾಗಿದೆ. 
* ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕನಿಷ್ಠ 18 ವರ್ಷ ಮೇಲ್ಪಟ್ಟು ಹಾಗೂ 32 ವರ್ಷ ಒಳಗಿನ ವಯೋಮಾನದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. 
* ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08532-231684/ 8618603928 


ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂ.14ರಂದು ಸರಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ - ನಿರ್ದೇಶಕರು ತಿಳಿಸಿದ್ದಾರೆ. 
* ಈ ಉದ್ಯೋಗ ಮೇಳವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿದಲ್ಲಿ ಜೂನ್ 14 ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 2ರವರೆಗೆ ವರೆಗೆ ನಡೆಯಲಿದೆ. 
* ಈ ಉದ್ಯೋಗ ಮೇಳದಲ್ಲಿ ಯುನೈಟೆಡ್ ಆಸ್ಪತ್ರೆ, ಬಜಾಜ್ ಆಟೋ, ವಿನಾಯಕ ಇಂಡಸ್ಟ್ರೀಸ್, ಅನ್ನಪೂರ್ಣ ಫೈನಾನ್ಸ್ ಸೇರಿದಂತೆ ಸುಮಾರು 100 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ.
* ಈ ಉದ್ಯೋಗದಲ್ಲಿ ಭಾಗವಹಿಸಲು ಅಭ್ಯರ್ಥಿಗಳು ITI / SSLC ಯಿಂದ ಪದವಿ ವರೆಗಿನ ಯಾವುದೇ ವಿದ್ಯಾರ್ಹತೆ ಹೊಂದಿದ್ದರೂ ಕೂಡ ಪಾಲ್ಗೊಳ್ಳಬಹುದಾಗಿದೆ. 
* ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-274846/ 9620095270ಗೆ ಸಂಪರ್ಕಿಸಬಹುದು.


ನಿಮ್ಮ ಸ್ಪರ್ಧಾತ್ಮಕ ಪರೀಕ್ಷಾ ತಯಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಬೇಗನೆ ಯಶಸ್ವಿಯಾಗಿ.....All The Best 
ಮುಂದೆ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು, ಅತಿ ಹೆಚ್ಚಿನ ರಿಯಾಯಿತಿ ದರದಲ್ಲಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Comments