Life is like this loading!

We've to prepare well to perform better

ವಲಯ ಅರಣ್ಯ ಅಧಿಕಾರಿ ನೇರ ನೇಮಕಾತಿಯ 73 ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Author: Kpsc Vaani | Date:8 ಜುಲೈ 2019
Image not found

ದಿನಾಂಕ 3.5.2019ರ ಪ್ರಕಟಣೆಯನ್ನು ಮುಂದುವರಿಸುತ್ತಾ 73 ವಲಯ ಅರಣ್ಯಧಿಕಾರಿ ಹುದ್ದೆಗಳ ನೇರ ನೇಮಕಾತಿ ಕುರಿತಂತೆ 1:2 ತಾತ್ಕಲಿಕ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ಮೂಲ ದಾಖಲಾತಿಗಳ ಪರಿಶೀಲನೆ ಹಾಗೂ ಇನ್ನಿತರ ಪರೀಕ್ಷೆಗಳನ್ನು ನಡೆಸಲಾಗಿರುತ್ತದೆ. ಸದರಿ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳನ್ನು ಅಂಕಗಳ ಮೆರಿಟ್ ಹಾಗೂ ಅಧಿಸೂಚನೆಯಲ್ಲಿ ಪ್ರಕಟಿಸಿರುವ ಪ್ರವರ್ಗವಾರು ಮೀಸಲಾತಿಯನ್ವಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ

ಮೂಲ ದಾಖಲೆಗಳ ಪರಿಶೀಲನೆ,ದೈಹಿಕ ತಾಳ್ವಿಕೆ (ಕಾಲ್ನಡಿಗೆ) ಪರೀಕ್ಷೆ ಹಾಗು ವೈದ್ಯಕೀಯ ಪರೀಕ್ಷೆಗಳಲ್ಲಿ ಅನರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಅನುಬಂಧ - 3 ರಲ್ಲಿ ಪ್ರಕಟಿಸಲಾಗಿದೆ.
ಈ ಮಾಹಿತಿಯನ್ನು ಅರಣ್ಯ ಇಲಾಖೆಯ ವೆಬ್ ಸೈಟ್ www.aranya.gov.in ನಲ್ಲಿ ಪ್ರಕಟಿಸಲಾಗಿದೆ.
1:1 (ಹುದ್ದೆ:ಅಭ್ಯರ್ಥಿ) ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳ ಮುಂದಿನ ನೇಮಕಾತಿ ಪ್ರಕ್ರಿಯೆಗಳ ಕುರಿತಂತೆ ಇಲಾಖಾ ವೆಬ್ ಸೈಟ್ ನಲ್ಲಿ ಮುಂದಿನ ಮುಂದಿನ ಹಂತದಲ್ಲಿ ಮಾಹಿತಿಯನ್ನು ಪ್ರಕಟಿಸಲಾಗಿವುದು.