Loading..!

ನವೆಂಬರ್ 18 ರಂದು ರಿಸರ್ವ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ
| Date:5 ಜನವರಿ 2019
Image not found
ನಗರ ಪೊಲೀಸ್ ಘಟಕದಲ್ಲಿ ಖಾಲಿ ಇರುವ ರಿಸರ್ವ್ ಸಬ್ ಇನ್ಸ್ಪೆಕ್ಟರ್ (DAAR/CAR) ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ನ.18 ರಂದು ಮೂರು ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಒಟ್ಟು 2080 ಅಭ್ಯರ್ಥಿಗಳಿಗೆ ಪತ್ರಿಕೆ-1 ಮತ್ತು ಪತ್ರಿಕೆ-2 ನ್ನು ಮಧ್ಯಹ್ನ 2 ಗಂಟೆಯಿಂದ 3:30 ರ ವರೆಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಇಲಾಖಾ ವೆಬ್ ಸೈಟ್ www.ksp.gov.in ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಕರಪತ್ರವನ್ನು ಜಾಲತಾಣದಿಂದ ಡೌನ್ಲೋಡ್ ಮಾಡಿಕೊಂಡು ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಬೇಕೆಂದು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Comments