UPSC 2019: ಐಎಫ್‌ಎಸ್ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್
| Date:18 ನವೆಂಬರ್ 2019
Image not found
ಕೇಂದ್ರ ಲೋಕ ಸೇವಾ ಅಯೋಗ (ಯುಪಿಎಸ್‌ಸಿ) 2019 ನೇ ಸಾಲಿನ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟಗೊಂಡಿದೆ. ಆಯೋಗದ ವೆಬ್‌ಸೈಟ್‌ನಲ್ಲಿ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿದ್ದು,ಪ್ರಮುಖ ಪರೀಕ್ಷೆಯು ಇದೇ ಡಿಸೆಂಬರ್ 1 ರಿಂದ 8ರ ವರೆಗೆ ನಡೆಯಲಿದೆ. ಅಭ್ಯರ್ಥಿಗಳಿಗೆ ಡಿಸೆಂಬರ್ 8,2019ರ ವರೆಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ.


ಮುಖ್ಯ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಪ್ರಮುಖ ಪರೀಕ್ಷೆ ಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಮುಂದಿನ ಹಂತವಾಗಿ ಸಂದರ್ಶನ ಇರಲಿದ್ದು, ಸಂದರ್ಶನದ ವೇಳಾಪಟ್ಟಿಯನ್ನು ವೆಬ್‌ಸೈಟ್‌ ನಲ್ಲಿ ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments

*