ಕರ್ನಾಟಕದಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 1,000 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ನೇಮಕಾತಿ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ. ಫೆಬ್ರವರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸುವ ಸಾಧ್ಯತೆ ಇದೆ. ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
- 110 ಹುದ್ದೆಗಳು ಕುಂದಾಪುರ ತಾಲ್ಲೂಕು ಕಚೇರಿಗೆ ಮಂಜೂರಾಗಿದ್ದು, ನೇಮಕಾತಿ ಮಾಡಿಕೊಳ್ಳಲು ಈಗಾಗಲೇ ಆದೇಶ ಹೊರಡಿಸಿದ್ದು, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷೆ ಪ್ರಾಧಿಕಾರಕ್ಕೆ (KEA)) ವಹಿಸಲಾಗಿದೆ.!!
* ಈ ಕುರಿತು ಮಾನ್ಯ ಮುಖ್ಯಮಂತ್ರಿ ಅವರು ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.
Comments