ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ20 ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಅಧಿಕೃತ ವೆಬ್‌ಸೈಟ್ https://aai.aero/ ನಲ್ಲಿ 02-04-2025 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳಲಾಗುತ್ತದೆ.
ಹುದ್ದೆಗಳ ವಿವರ : 20
Hisar 01
Jewar 02
CHQ, New Delhi 04
Kolkata 02
Navi-Mumbai 02
Amravati 01
Dholera (M-Ahmedabad) 01
Ahmedabad 01
Chennai 02
Madurai 01
Tuticorin 01
Bhogapuram (M-Vizag) 02
ವಿದ್ಯಾರ್ಹತೆ :
ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. ಕನಿಷ್ಠ 2 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಯ ಗರಿಷ್ಠ 65 ವರ್ಷಗಳನ್ನು ಮೀರಿರಬಾರದು.
ವೇತನ ಶ್ರೇಣಿ :
ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ದೈಹಿಕಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ https://aai.aero/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಜೂನಿಯರ್ ಮತ್ತು ಸೀನಿಯರ್ ಅಸಿಸ್ಟೆಂಟ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
Comments