Life is like this loading!

We've to prepare well to perform better

ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:3 ಮಾರ್ಚ್ 2019
Image not found

  ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಕೊಡಗು ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 31.2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಪೊನ್ನಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

Application Start Date:  3 ಮಾರ್ಚ್ 2019

Application End Date:  31 ಮಾರ್ಚ್ 2019

Selection Procedure:  ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ/ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

Qualification:  * ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
* ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

Age Limit:  ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

** ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು

* If above links are not opening, use the browser to visit kpscvaani.com website