Loading..!

ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:28 ಜೂನ್ 2020
not found
* ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು ನಗರ ಜಿಲ್ಲೆಯಾದ ಎನ್.ಯು.ಹೆಚ್.ಎಮ್ ಯೋಜನೆಯಡಿಯಲ್ಲಿ ಬೆಂಗಳೂರು ನಗರ ಜಿಲ್ಲೆ ಮತ್ತು ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಅನುಮೋದನೆಯಾಗಿರುವ ಕಿರಿಯ ಪುರುಷ ಆರೋಗ್ಯ ಸಹಾಯಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 133 ಹುದ್ದೆಗಳಿದ್ದು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 06-07-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

* ಬೆಂಗಳೂರು ನಗರ ಜಿಲ್ಲೆಯಲ್ಲಿ 2020-21ನೇ ಸಾಲಿಗೆ ಎನ್ಎಚ್ಎಂ ಯೋಜನೆಯ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಎನ್ಎಚ್ಎಂ ಮಾರ್ಗಸೂಚಿಗಳಂತೆ ಗುತ್ತಿಗೆ ಆಧಾರದ ಮೇಲೆ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : 04-07-2020 ಬೆಳಗ್ಗೆ 11:00 ಗಂಟೆಗೆ ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲಾತಿಗಳೊಂದಿಗೆ 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ, ಹಳೇ ಟಿ.ಬಿ. ಆಸ್ಪತ್ರೆ, ಹಳೆ ಮದ್ರಾಸ್ ರಸ್ತೆ, ಇಂದಿರಾನಗರ, ಬೆಂಗಳೂರು 38 ಇಲ್ಲಿಗೆ ಹಾಜರಾಗುವುದು.

* ಬೆಂಗಳೂರು ನಗರ ಜಿಲ್ಲೆಯಲ್ಲಿ 2020-21ನೇ ಸಾಲಿಗೆ ಎನ್ಎಚ್ಎಂ ಯೋಜನೆಯ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಎನ್ಎಚ್ಎಂ ಮಾರ್ಗಸೂಚಿಗಳಂತೆ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಒಟ್ಟು 205 ಹುದ್ದೆಗಳಿದ್ದು ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು.

ಈ ಪ್ರಕಟಣೆಯು Rolling Advertisement ಆಗಿರುವುದರಿಂದ ಅವಧಿಯರವರೆಗೆ ಇರುತ್ತದೆ. ಈ ಮೇಲ್ಕಂಡ ಹುದ್ದೆಗಳಿಗೆ ಪ್ರತಿ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ಒಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ನೋಂದಣಿ ಮಾಡಿಕೊಂಡು, ನೋಂದಣಿಯಾದ ಅರ್ಹ ಅಭ್ಯರ್ಥಿಗಳನ್ನು ಮಾತ್ರ ದಾಖಲಾತಿ ಪರಿಶೀಲನೆಗೆ ಪರಿಗಣಿಸಲಾಗುವುದು, ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲಾತಿಗಳೊಂದಿಗೆ 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ, ಹಳೇ ಟಿ.ಬಿ. ಆಸ್ಪತ್ರೆ, ಹಳೆ ಮದ್ರಾಸ್ ರಸ್ತೆ, ಇಂದಿರಾನಗರ, ಬೆಂಗಳೂರು-38 ಇಲ್ಲಿಗೆ ಹಾಜರಾಗುವುದು.

- ಈ ಮೂರೂ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅದಿಕ್ರುತ ಪತ್ರಿಕಾ ಪ್ರಕಟಣೆಗಳನ್ನು ಕೂಡಲೇ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ
No. of posts:  340

Comments