ಅಸ್ಸಾಂ ರೈಫಲ್ಸ್ ನಲ್ಲಿ ಖಾಲಿ ಇರುವ ಒಟ್ಟು 215 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಭಾರತೀಯ ಅರೆ ಸೇನಾಪಡೆಯಾದ ಅಸ್ಸಾಂ ರೈಫಲ್ಸ್ ನಲ್ಲಿ ಖಾಲಿ ಇರುವ 215 ತಾಂತ್ರಿಕ, ಟ್ರೇಡ್ಸ್ ಮನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಹುದ್ದೆಗಳ ವಿವರ : 215
(a) Religious Teacher (RT) : 3
(b) Radio Mechanic (RM) : 17
(c) Lineman (Lmn) Field : 8
(d) Engineer Equipment Mechanic (EE Mech) : 4
(e) Electrician Mechanic Vehicle : 17
(f) Recovery Vehicle Mechani : 2
(g) Upholster : 8
(h) Vehicle Mechanic fitter : 20
(i) Draughtsman : 10
(k) Electrical and Mechanical :
(l) Plumber : 13
(m) Operation Theatre Technician (OTT) : 1
(n) Pharmacist : 8
(o) X-Ray Assistant : 10
(p) Veterinary Field Assistant (VFA) : 7
(q) Safal : 70
ವಿದ್ಯಾರ್ಹತೆ :
ಅಸ್ಸಾಂ ರೈಫಲ್ಸ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 10ನೇ,12ನೇ, ಡಿಪ್ಲೊಮಾ, ಐಟಿಐ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ :
ಅಭ್ಯರ್ಥಿಯು ಕನಿಷ್ಠ 18 ಮತ್ತು ಗರಿಷ್ಢ30 ವರ್ಷ ವಯೋಮಿತಿ ಹೊಂದಿರಬೇಕು.
ಅರ್ಜಿಶುಲ್ಕ :
SC/ST/ಮಹಿಳಾ/ಮಾಜಿ ಸೈನಿಕರ ಅಭ್ಯರ್ಥಿಗಳಿಗೆ: ಇರುವುದಿಲ್ಲ
ಗ್ರೂಪ್ ಬಿ ಹುದ್ದೆಗಳಿಗೆ (ಧಾರ್ಮಿಕ ಶಿಕ್ಷಕರು, ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್):
ಎಲ್ಲಾ ಅಭ್ಯರ್ಥಿಗಳಿಗೆ: ₹200/-
ಗ್ರೂಪ್ ಸಿ ಹುದ್ದೆಗಳಿಗೆ:
ಎಲ್ಲಾ ಅಭ್ಯರ್ಥಿಗಳು: ₹100/-
ಪಾವತಿ ವಿಧಾನ : ಆನ್‌ಲೈನ್ ಮೂಲಕ
ಆಯ್ಕೆ ವಿಧಾನ :
ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್ https://assamrifles.gov.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಅಸ್ಸಾಂ ರೈಫಲ್ಸ್ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ಮೆಕ್ಯಾನಿಕ್ & ಟ್ರೇಡ್ಸ್‌ಮೆನ್ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.
ಅರ್ಜಿಸಲ್ಲಿಸುವ ವಿಧಾನ :
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 22-02-2025 ರಿಂದ 22-03-2025 ರೊಳಗೆ ಅಸ್ಸಾಂ ರೈಫಲ್ಸ್ ನೇಮಕಾತಿ ಅಧಿಕೃತ ವೆಬ್‌ಸೈಟ್ https://assamrifles.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-02-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03-2025
Comments