ಮೈಸೂರಿನ ಆಡಳಿತ ತರಬೇತಿ ಸಂಸ್ಥೆ (ATI) ಯಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ

Tags: SSLC
Published by: Yallamma G
|
ಮೈಸೂರಿನ ಆಡಳಿತ ತರಬೇತಿ ಸಂಸ್ಥೆ (ATI) ಯಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ

ಮೈಸೂರಿನ ಆಡಳಿತ ತರಬೇತಿ ಸಂಸ್ಥೆ (ATI) ಯಲ್ಲಿ ಖಾಲಿ ಇರುವ 2 ಬೆರಳಚ್ಚುಗಾರರು & ಗ್ರೂಪ್ -ಡಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/02/2024 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯಥಿಗಳು ಭಾರತೀಯ ನಾಗರೀಕರಾಗಿರಬೇಕು. 
ಹುದ್ದೆಗಳ ವಿವರ : 2
ಬೆರಳಚ್ಚುಗಾರರು : 1 
ಗ್ರೂಪ್ -ಡಿ : 1

Job Overview
No. of posts
2
Start Date
18 ಜನವರಿ 2024
End Date
15 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಮೈಸೂರು, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ. 
- ಬೆರಳಚ್ಚುಗಾರರ ಹುದ್ದೆಗೆ : ಶೈಕ್ಷಣಿಕ ಪರೀಕ್ಷೆಗಳಲ್ಲಿ ಪಡೆದಿರುವ ಶೇಕಡವಾರು ಅಂಕಗಳ ಆಧಾರದ ಮೇಲೆ 1: 25 ಅನುಪಾತದಲ್ಲಿ ಕೌಶಲ್ಯ ಪರೀಕ್ಷೆಗಳಿಗೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗುವುದು ( ಕೌಶಲ್ಯ ಪರೀಕ್ಷೆಯಲ್ಲಿ ಶೇ.50 ರಷ್ಟು ಅಂಕಗಳನ್ನು ಪಡೆದವರನ್ನು ಮಾತ್ರ ಪರಿಗಣಿಸಲಾಗುವುದು) ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳು ಮತ್ತು ಕೌಶಲ್ಯ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳನ್ನು ಒಟ್ಟುಗೂಡಿಸಿ ಅದರ ಶ್ರೇಯಾಂಕದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 
- ಗುಂಪು ಡಿ ಹುದ್ದೆಗೆ : ಅರ್ಹತಾದಾಯಕ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಬೆರಳಚ್ಚುಗಾರ ಹುದ್ದೆಗೆ : ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕನ್ನಡ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಹಿರಿಯ ಬೆರಳಚ್ಚು ಪರೀಕ್ಷೆಯನ್ನು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಥವಾ ಕನ್ನಡ ಬೆರಳಚ್ಚಿನೊಂದಿಗೆ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ತೇರ್ಗಡೆಯಾಗಿರತಕ್ಕದ್ದು.
* ಗ್ರೂಪ್-ಡಿ ಹುದ್ದೆಗೆ : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ತೇರ್ಗಡೆಯಾಗಿರತಕ್ಕದ್ದು.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.