ಬಾಗಲಕೋಟ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಾಗಲಕೋಟ ಘಟಕದಲ್ಲಿ ಖಾಲಿ ಇರುವ 54 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/04/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 54
* ಶೀಘ್ರಲಿಪಿಗಾರ :1
* ಬೆರಳಚ್ಚುಗಾರ : 2
* ಬೆರಳಚ್ಚು ನಕಲುಗಾರ : 1
*ಆದೇಶ ಜಾರಿಕಾರ : 1
* ಸಿಪಾಯಿ : 37
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದ ಪಡಿಸಿರುವ ಪ್ರಾರಂಭಿಕ ದಿನಾಂಕ: 21/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/04/2022
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 22/04/2022
- No. of posts
- 54
- Start Date
- 22 ಮಾರ್ಚ್ 2022
- End Date
- 21 ಎಪ್ರಿಲ್ 2022
- Last Payment
- 22 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- ಬಾಗಲಕೋಟ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಕನಿಷ್ಟ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು, ಈ ಪ್ರಾಧಿಕಾರವು ನಡೆಸಲಾದ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ¸ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುವದು.
* ಆದೇಶ ಜಾರಿಕಾರ, ಸಿಪಾಯಿ ಹುದ್ದೆಗಳಿಗೆ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕಾರ, ಸಿಪಾಯಿ ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 150/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.