ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
29 ಏಪ್ರಿಲ್ 2022 Others Important

ಬಳ್ಳಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಳ್ಳಾರಿ ಘಟಕದಲ್ಲಿ ಖಾಲಿ ಇರುವ 33 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/05/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 27/04/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/05/2022
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 31/05/2022  .

Job Overview
No. of posts
33
Start Date
27 ಎಪ್ರಿಲ್ 2022
End Date
29 ಮೇ 2022
Last Payment
31 ಮೇ 2022
Employment Type
FULL_TIME
Organization
KPSC Vaani (Website)
Location
ಬಳ್ಳಾರಿ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 200/-
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 200/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.