ಬೆಂಗಳೂರು ಗ್ರಾಮೀಣ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ "ಗ್ರಾಮ ಕಾಯಕ ಮಿತ್ರ" ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Surekha Halli | Date:11 ಎಪ್ರಿಲ್ 2021
ಮಹಾತ್ಮಗಾಂಧಿ ನರೇಗಾ ಯೋಜನಡೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಹಾಗೂ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 25 'ಗ್ರಾಮ ಕಾಯಕ ಮಿತ್ರ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಏಪ್ರಿಲ್ 10, 2021ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿಗದಿಪಡಿಸಿದ ಕೊನೆಯ ದಿನಾಂಕಏಪ್ರಿಲ್ 10,2021ರ ಸಂಜೆ 5:00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- 'ಗ್ರಾಮ ಕಾಯಕ ಮಿತ್ರ' ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.
- ಹೆಚ್ಚಿನ ವಿವರಗಳಿಗಾಗಿ ಗ್ರಾಮ ಪಂಚಾಯಿತಿ ಅಥವಾ ತಾಲ್ಲೂಕು ಪಂಚಾಯಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
No. of posts: 25
Comments