ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
17 ಜೂನ್ 2024 Others
ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯಡಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ನರೇಗಾ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ 5 ಜಿಲ್ಲಾ ಎಂ.ಐ.ಎಸ್ ಸಂಯೋಜಕರು,  ತಾಂತ್ರಿಕ ಸಹಾಯಕರು, ತಾಂತ್ರಿಕ ಸಹಾಯಕರು (ರೇಷ್ಮೆ) ಮತ್ತು ತಾಂತ್ರಿಕ ಸಹಾಯಕರು (ಅರಣ್ಯ) ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
Job Overview
No. of posts
5
Start Date
12 ಜೂನ್ 2024
End Date
2 ಜುಲೈ 2024
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳ ವಿವರ : 5
ಜಿಲ್ಲಾ ಎಂ.ಐ.ಎಸ್ ಸಂಯೋಜಕರು - 01
ತಾಂತ್ರಿಕ ಸಹಾಯಕರು - 02
ತಾಂತ್ರಿಕ ಸಹಾಯಕರು (ಅರಣ್ಯ) - 01
ತಾಂತ್ರಿಕ ಸಹಾಯಕರು (ಕೃಷಿ) - 01
- ಈ ಹುದ್ದೆಗಳಿಗೆ ಅರ್ಜಿಯನ್ನ https://zpbengaluruurban.karnataka.gov.in ವೆಬ್ ಸೈಟ್ ನಿಂದ ಡಾನ್ ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ 2-07-2024 ರಂದು ಸಂಜೆ 5.30 ಗಂಟೆಯೊಳಗೆ ಟಪಾಲು ಶಾಖೆಗೆ ಖುದ್ದಾಗಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ : 
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ,
ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು 560070. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech/ B.sc/ MCA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.