Loading..!

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

Tags: Degree
Published by: Yallamma G
|
ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 546 Acquisition ಆಫೀಸರ್ಸ್, ಹೆಡ್ ಹೆಲ್ತ್ ಟೆಕ್ನಾಲಜಿ ಮತ್ತು ಪ್ರಾಡಕ್ಟ್ ಹೆಡ್ ಪ್ರೈವೇಟ್ ಬ್ಯಾಂಕಿಂಗ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14/03/2023 ರೊಳಗೆ ಅರ್ಜಿ ಸಲ್ಲಿಸಬಹುದು.

Job Overview
No. of posts
546
Start Date
24 ಫೆಬ್ರುವರಿ 2023
End Date
14 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ  ಆಯ್ಕೆ ಮಾಡಿಕೊಳ್ಳಲಾಗುವುದು.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
* ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು ರೂ. 600/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 27 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree

Comments