ಬ್ಯಾಂಕ್ ಆಫ್ ಮಹಾರಾಷ್ಟ್ರ (BOM) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಮಹಾರಾಷ್ಟ್ರ (BOM) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by Savita Halli
07 ಫೆಬ್ರವರಿ 2022 Others State

ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ದಲ್ಲಿ 500 ಜನರಲಿಸ್ಟ್ ಅಧಿಕಾರಿ ಸ್ಕೇಲ್ II III ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾದಲು ಸಿದ್ಧರಿರುವ ಆಸಕ್ತ  ಅಭ್ಯರ್ಥಿಗಳು ದಿನಾಂಕ  22/02/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು.

Job Overview
No. of posts
500
Start Date
7 ಫೆಬ್ರುವರಿ 2022
End Date
22 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
All Over India, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪರೀಕ್ಷೆಯನ್ನು ಮಾರ್ಚ್ 12, 2022ರಂದು ನಿಗದಿಪಡಿಸಲಾಗಿದೆ

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಶೇ.60ರಷ್ಟು ಅಂಕಗಳೊಂದಿಗೆ ಹೊಂದಿರುವ ಅಥವಾ ಸಿಎ/ಸಿಎಂಎ/ಸಿಎಫ್‌ಎ ವಿದ್ಯಾರ್ಹತೆ ಹೊಂದಿರಬೇಕು.

Fee:

* ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ಓಬಿಸಿ ಅಭ್ಯರ್ಥಿಗಳು 1,180/-ರೂ ಮತ್ತು
* ಪರಿಶಿಷ್ಟ ಪಂಗಡ/ಪರಿಶಿಷ್ಟ ಜಾತಿ ಅಭ್ಯರ್ಥಿಗಳು 118/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

Age Limit:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 38 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.