ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಇಂಜಿನಿಯರ್ ಹಾಗೂ ಟೆಕ್ನಿಷಿಯನ್ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/01/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
BROADCAST ENGINEERING CONSULTANTS INDIA LIMITED,
Regional office (Ro),
#162,1st Cross, 2nd Main,AGS layout, RMV 2nd stage,
Bangalore-560094.
ಇ ಮೇಲ್ ವಿಳಾಸ : hr.bengaluru@becil.com
ಈ ಹುದ್ದೆಗಳಿಗೆ ಸಂಸ್ಥೆಯ ನಿಯಮಗಳ ಅನುಸಾರವಾಗಿ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಡಿಪ್ಲೊಮಾ/ BE/ B.Tech (Electrical / Mech)/ ITI (Electrical / Electronics)/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ನುಗುಣವಾಗಿ ಗರಿಷ್ಠ 34 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 25,000/- ರಿಂದ 42,000/- ಗಳ ವರೆಗೆ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments