ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 20 ಡೆಪ್ಯುಟಿ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್) ಮತ್ತು ಡೆಪ್ಯುಟಿ ಇಂಜಿನಿಯರ್ (ಮೆಕ್ಯಾನಿಕಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 20
Deputy Engineer (Electronics) / E-II : 08
Deputy Engineer (Mechanical) : 12
ವೇತನ ಶ್ರೇಣಿ : 40,000-1,40,000/-
ವಿದ್ಯಾರ್ಹತೆ :
B.E / B.Tech / AMIE / GIETE / B.Sc Engineering ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಅಭ್ಯರ್ಥಿಗಳು ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ :
ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿಯಲ್ಲಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 3 ವರ್ಷ
SC/ST ಅಭ್ಯರ್ಥಿಗಳಿಗೆ: 5 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ/OBC/EWS ಅಭ್ಯರ್ಥಿಗಳು : ರೂ. 472/-
SC/ST/PwBD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು : ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ :ಲೇಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ :
1 BEL ಅಧಿಕೃತ ಅಧಿಸೂಚನೆಯನ್ನು ಗಮನದಿಂದ ಓದಿ.
2 ಅರ್ಜಿ ಸಲ್ಲಿಸುವ ಮೊದಲು, ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ.
3 BEL ಅಧಿಕೃತ ವೆಬ್‌ಸೈಟ್ (bel-india.in) ಮೂಲಕ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
4 ಅರ್ಜಿ ಶುಲ್ಕವನ್ನು (ಅಗತ್ಯವಿದ್ದರೆ) SBI Collect ಮೂಲಕ ಪಾವತಿಸಿ.
5 ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಸಂರಕ್ಷಿಸಿ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 2025 ಮಾರ್ಚ್ 31
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು, BEL ಅಧಿಕೃತ ವೆಬ್‌ಸೈಟ್ (bel-india.in) ಗೆ ಭೇಟಿ ನೀಡಿ.
Comments