ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 47 ಟ್ರೇನಿ ಇಂಜಿನಿಯರಿಂಗ್-l ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/03/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- No. of posts
- 47
- Start Date
- 22 ಫೆಬ್ರುವರಿ 2024
- End Date
- 7 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE / B. Tech / B.Sc/ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 177/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Comments