ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿನ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ |ಈ ಕುರಿತು ಮಾಹಿತಿ ನಿಮಗಾಗಿ
ಬೆಳಗಾವಿ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 41 ಶೀಘ್ರಲಿಪಿಗಾರರು ಗ್ರೇಡ್-III, ಬೆರಳಚ್ಚುಗಾರ, ಆದೇಶ ಜಾರಿಕಾರರು ಮತ್ತು ಸಿಪಾಯಿಗಳು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 14/03/2024 ಹಾಗೂ ಕೊನೆಯ ದಿನಾಂಕ 14 ಏಪ್ರಿಲ್ 2024 ರಾತ್ರಿ : 11.59 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 41
ಶೀಘ್ರಲಿಪಿಗಾರರು ಗ್ರೇಡ್-III - 05
ಬೆರಳಚ್ಚುಗಾರ - 01
ಆದೇಶ ಜಾರಿಕಾರರು - 02
ಸಿಪಾಯಿಗಳು - 33
- No. of posts
- 41
- Start Date
- 14 ಮಾರ್ಚ್ 2024
- End Date
- 14 ಎಪ್ರಿಲ್ 2024
- Last Payment
- 15 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಬೆಳಗಾವಿ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಹಾಗೂ ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
* ಸ್ಟೆನೋಗ್ರಾಫರ್ ಗ್ರೇಡ್-III, ಬೆರಳಚ್ಚುಗಾರ ಹುದ್ದೆಗಳಿಗೆ :
- ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು .
* ಆದೇಶ ಜಾರಿಕಾರರು ಮತ್ತು ಸಿಪಾಯಿಗಳು ಹುದ್ದೆಗಳಿಗೆ :
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.
Fee:
* ಸ್ಟೆನೋಗ್ರಾಫರ್ ಗ್ರೇಡ್-III, ಬೆರಳಚ್ಚುಗಾರ ಹುದ್ದೆಗಳಿಗೆ :
- ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ 300/ -
- ಪ .ಜಾ, ಪ .ಪಂ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.
* ಆದೇಶ ಜಾರಿಕಾರರು ಮತ್ತು ಸಿಪಾಯಿಗಳು ಹುದ್ದೆಗಳಿಗೆ :
- ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ 250/ -
- ಪ .ಜಾ, ಪ .ಪಂ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.