Loading..!

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ (BSCL) ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ
Published by: Basavaraj Halli | Date:21 ಜನವರಿ 2020
not found
ಬೆಳಗಾವಿಯ ಸ್ಮಾರ್ಟ್ ಸಿಟಿ ಲಿಮಿಟೆಡ್(BSCL)ನ ಮಾನ್ಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಈ ಕೆಳಗೆ ವಿವರಿಸಿರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ :
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಸಿವಿಲ್)
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ವಿದ್ಯುತ್)
ಕಿರಿಯ ನಗರ ಯೋಜಕರು
ವ್ಯವಸ್ಥಾಪಕರು (ಸಾಫ್ಟವೇರ್)
ಒಟ್ಟು ಹುದ್ದೆಗಳ ಸಂಖ್ಯೆ: 04

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 28 ಜನವರಿ 2020 ಕೊನೆಯ ದಿನಾಂಕವಾಗಿರುತ್ತದೆ.

ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಈ ನೇಮಕಾತಿ ಅಧಿಸೂಚನೆಯ ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಈ ನೇಮಕಾತಿಯ ಹೆಚ್ಚಿನ ವಿವರಗಳನ್ನು ಅಭ್ಯರ್ಥಿಗಳು ಪಡೆದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬೇಕಾದ ಎಲ್ಲ ಮೂಲ ದಾಖಲಾತಿಗಳ ನಕಲು ಪ್ರತಿಯೊಂದಿಗೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಂಚೆ / ಕೊರಿಯರ್ ಅಥವಾ ಖುದ್ದಾಗಿ ಹಾಜರಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ (BSCL),
ಆಫೀಸ್ ಆಫ್ ದಿ ಮ್ಯಾನೇಜಿಂಗ್ ಡೈರೆಕ್ಟರ್,
1st ಫ್ಲೋರ್, BUDA ಆಫೀಸ್, ಅಶೋಕ ನಗರ,
ಬೆಳಗಾವಿ - 590016.
Phone- 0831-2461352/2474166
No. of posts:  4
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments

Shree Mokaashi ಜನ. 21, 2020, 10:56 ಅಪರಾಹ್ನ