ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 11 ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು2025 ಮಾರ್ಚ್ 7 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹುದ್ದೆಗಳ ವಿವರ :
ಹುದ್ದೆಯ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್/ ಮ್ಯಾನೇಜರ್
ಒಟ್ಟು ಹುದ್ದೆಗಳು: 11
ಕೆಲಸದ ಸ್ಥಳ: ಮೈಸೂರು, ಕರ್ನಾಟಕ
ವೇತನ ಶ್ರೇಣಿ :
ಅಸಿಸ್ಟೆಂಟ್ ಮ್ಯಾನೇಜರ್: ಮಾಸಿಕ ರೂ. 50,000-1,60,000/-
ಮ್ಯಾನೇಜರ್: ಮಾಸಿಕ ರೂ. 60,000-1,80,000/-
ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ :
ಅಸಿಸ್ಟೆಂಟ್ ಮ್ಯಾನೇಜರ್ : ಗರಿಷ್ಠ 30 ವರ್ಷ
ಮ್ಯಾನೇಜರ್ : ಗರಿಷ್ಠ 34 ವರ್ಷ
ವಯೋಮಿತಿಯಲ್ಲಿ ಸಡಿಲಿಕೆ :
OBC-NCL ಅಭ್ಯರ್ಥಿಗಳಿಗೆ : 3 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷ
PwD ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆ ವಿಧಾನ :
ಆಯ್ಕೆಯ ಪ್ರಕ್ರಿಯೆಯಲ್ಲಿ ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿರುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್ https://www.bemlindia.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಸಹಾಯಕ ವ್ಯವಸ್ಥಾಪಕ/ವ್ಯವಸ್ಥಾಪಕ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ನೇರ ಸಂದರ್ಶನದ ವಿವರಗಳು :
ದಿನಾಂಕ: 2025 ಮಾರ್ಚ್ 7
ಸ್ಥಳ: BEML ಲಿಮಿಟೆಡ್, ಫ್ಲಾಟ್ ನಂ. E,F,G,H, ವಂದನಾ, 11ನೇ ಮಹಡಿ, ಟೋಲ್ಸ್ಟಾಯ್ ಮಾರ್ಗ, ಕಾನಾಟ್ ಪ್ಲೇಸ್, ನವದೆಹಲಿ-110001
ಅಭ್ಯರ್ಥಿಗಳು ನಿಗದಿತ ದಿನಾಂಕದಲ್ಲಿ ಮೇಲ್ಕಂಡ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ bemlindia.in ಗೆ ಭೇಟಿ ನೀಡಿ.
Comments