ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯದ ಕಾರ್ಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
ಬೆಂಗಳೂರಿನಲ್ಲಿರುವ ನಗರ ಸಿವಿಲ್ ನ್ಯಾಯಾಲಯದ ಕಾರ್ಯಾಲಯ, ನ್ಯಾಯಾಲಯದ ಸಂಕೀರ್ಣ ಬೆಂಗಳೂರು ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್ - III, ಬೆರಳಚ್ಚುಗಾರ, ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/05/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 133
* ಶೀಘ್ರಲಿಪಿಗಾರ ಗ್ರೇಡ್ - III : 17
* ಬೆರಳಚ್ಚುಗಾರ : 24
* ಆದೇಶ ಜಾರಿಕರ : 05 ಮತ್ತು
* ಜವಾನ : 87
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಪಡಿಸಿರುವ ಪ್ರಾರಂಭಿಕ ದಿನಾಂಕ: 21/04/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/05/2022
* ಈ ಚಲನ್ ಮೂಲಕ: 21/05/2022
- No. of posts
- 133
- Start Date
- 26 ಎಪ್ರಿಲ್ 2022
- End Date
- 20 ಮೇ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
* ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಹತಾ ಶೈಕ್ಷಣಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಹಾಗೂ ಈ ಪ್ರಾಧಿಕಾರ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಒಟ್ಟು ಅಂಕಗಳ ಶೇ ಆಧಾರದ ಮೇಲೆ ಒಂದು ಹುದ್ದೆಗೆ 1:5 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನಕ್ಕೆ ಒಟ್ಟು 5 ಅಂಕಗಳನ್ನು ನಿಗದಿಪಡಿಸಲಾಗಿದೆ.
* ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳಿಗೆ SSLC ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಆಧಾರದ ಮೇಲೆ ಒಂದು ಹುದ್ದೆಗೆ 1:25 ಅನುಪಾತದಂತೆ ಮತ್ತು ಜವಾನ ಹುದ್ದೆಗಳಿಗೆ 1:10 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗದಿಪಡಿಸಲಾಗಿದೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಶೀಘ್ರಲಿಪಿಗಾರ ಗ್ರೇಡ್ - III, ಬೆರಳಚ್ಚುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳಿಗೆ SSLC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಓದಲು ಬರೆಯಲು ಬರಬೇಕು
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-
* ಪ್ರವರ್ಗ 2A, 2B, 3A, 3Bಗೆ ಸೇರಿದ ಅಭ್ಯರ್ಥಿಗಳು ರೂ. 100/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ - 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಮತ್ತು ಗರಿಷ್ಠ ವಯಸ್ಸು ಈ ಕೆಳಕಂಡಂತೆ ಇರಬೇಕು.
* ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 35 ವರ್ಷಗಳು
* ಪ್ರವರ್ಗ 2A, 2B, 3A, 3Bಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು ಹಾಗೂ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ - 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.