ಬೀದರ್ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Savita Halli
|
ಬೀದರ್ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೀದರ್ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಸ್ಥಳೀಯ ವೃಂದದ ಮತ್ತು ಸ್ಥಳೀಯೇತರ ವೃಂದದ 57 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/05/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ: 57
* ಸ್ಥಳೀಯ ವೃಂದ(ಹೈ.ಕ) - 46
* ಸ್ಥಳೀಯೇತರ ವೃಂದ - 11

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 11/04/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 16/05/2022

Job Overview
No. of posts
57
Start Date
15 ಎಪ್ರಿಲ್ 2022
End Date
16 ಮೇ 2022
Employment Type
FULL_TIME
Organization
KPSC Vaani (Website)
Location
ಬೀದರ್ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ 2ಎ, 2ಬಿ, 3ಎ, 3ಬಿ ರೂ. 200/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 100/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification

Comments