ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಇಲ್ಲಿ ಖಾಲಿ ಇರುವ 18 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Savita Halli
17 ಡಿಸೆಂಬರ್ 2021
BMRCL-Bangalore Metro Rail Corporation Limited
State
ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 18 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯು 3 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕ 17 ಜನವರಿ 2022 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
Job Overview
- No. of posts
- 18
- Start Date
- 17 ಡಿಸೆಂಬರ್ 2021
- End Date
- 17 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ Diploma/ BE/ B.Tech/ B. Arch ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.