ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಾಮರಾಜನಗರ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/04/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 28
* ಶೀಘ್ರಲಿಪಿಗಾರ :3
* ಬೆರಳಚ್ಚುಗಾರ : 2  
* ಬೆರಳಚ್ಚು ನಕಲುಗಾರ : 3
 *ಆದೇಶ ಜಾರಿಕಾರ : 6
* ಸೇವಕ : 12
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 12/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/04/2022
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 11/04/2022

Job Overview
No. of posts
28
Start Date
12 ಮಾರ್ಚ್ 2022
End Date
10 ಎಪ್ರಿಲ್ 2022
Last Payment
11 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಚಾಮರಾಜನಗರ ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಹುದ್ದೆಗಳಿಗೆ   ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ  1: 5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಸೇವಕ ಹುದ್ದೆಗಳಿಗೆ  ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕಾರ, ಸೇವಕ ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
To Download Official Notification

Comments