ಚಿಕ್ಕಬಳ್ಳಾಪುರ ಜಿಲ್ಲೆ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಚಿಕ್ಕಬಳ್ಳಾಪುರ ಜಿಲ್ಲೆ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
31 ಜುಲೈ 2022 Others Important

ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಸತ್ರ ನ್ಯಾಯಾಲಯ, ಚಿಕ್ಕಬಳ್ಳಾಪುರ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/08/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 34
* ಶೀಘ್ರಲಿಪಿಗಾರ : 06
* ಬೆರಳಚ್ಚುಗಾರ : 01 
* ಬೆರಳಚ್ಚು ನಕಲುಗರ : 02
 *ಆದೇಶ ಜಾರಿಕಾರ : 01
* ಸೇವಕ : 24

Job Overview
No. of posts
34
Start Date
31 ಜುಲೈ 2022
End Date
27 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಚಿಕ್ಕಬಳ್ಳಾಪುರ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ  ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತ್ತೆ 5 ನಿಮಿಷ ನೀಡಿರುವ ಉಕಲೇಖನವನ್ನು 45 ನಿಮಿಷದಲ್ಲಿ ಬೆರಳಚ್ಚು ಯಂತ್ರದಲ್ಲಿ ಲಿಪ್ಯಂತರ ಮಾಡಬೇಕು ಇಅದರಲ್ಲಿ ಆಯ್ಕೆ ಆದವರನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳಿಗೆ  ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕಾರ, ಸೇವಕ ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 
* ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ರೂ . 200/-
* ಪ್ರವರ್ಗ -2 ಎ , 2 ಬಿ ಮತ್ತು 3 ಎ , 3 ಬಿ ಗೆ ಸೇರಿದ ಅಭ್ಯರ್ಥಿಗಳು ರೂ . 100/- 
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ , ಪ್ರವರ್ಗ -1 ರೂ . 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.