ಚಿಕ್ಕಮಗಳೂರು ಜಿಲ್ಲೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳನ್ನು ನೇಮಕಕ್ಕೆ ಅರ್ಜಿ ಆಹ್ವಾನ

ಚಿಕ್ಕಮಗಳೂರು  ಜಿಲ್ಲೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳನ್ನು ನೇಮಕಕ್ಕೆ ಅರ್ಜಿ ಆಹ್ವಾನ
Published by Savita Halli
17 ಫೆಬ್ರವರಿ 2022 Department of Women and Child Development State

ಚಿಕ್ಕಮಗಳೂರು  ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 81 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತರು 17-03-2022  ಸಾಯಂಕಾಲ 5:30  ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 81
ಕಾರ್ಯಕರ್ತೆಯರು - 22
ಅಂಗನವಾಡಿ ಸಹಾಯಕಿಯರ - 59

Job Overview
No. of posts
81
Start Date
17 ಫೆಬ್ರುವರಿ 2022
End Date
17 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಚಿಕ್ಕಮಗಳೂರು, KA,
Selection Procedure:

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.


 1. ಅರ್ಹ ವಿದ್ಯಾರ್ಹತೆ ಹೊಂದಿದ ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು, ಅಂಗನವಾಡ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ,ಆಸಿಡ್ ದಾಳಿಗೆ ತುತ್ತಾದ ಮಹಿಳೆಯರನ್ನು ಪ್ರಥಮ ಆದ್ಯತೆ ಮೇರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು. 


2. ಇಲಾಖೆಯ ಸುಧಾರಣೆ ಸಂಸ್ಥೆಗಳಲ್ಲಿ ಆಶ್ರಯ ಪಡೆದ ಹಾಲಿ ಮತ್ತು ಮಾಜಿ ನಿವಾಸಿಗಳು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಯ ಪ್ರಕರಣವನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಆಯ್ಕೆ ಮಾಡಲಾಗುವುದು.


3. ಅರ್ಹ ವಿದ್ಯಾರ್ಹತೆ ಹೊಂದಿದ ವಿಧವೆಯರು ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಗೆ ಒಳಗಾದ ಮಹಿಳೆ ಮತ್ತು ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ವಿಧವೆಯರನ್ನೇ ಆಯ್ಕೆ ಮಾಡಲಾಗುವುದು. ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ (ವಿಧವೆಗೆ) ಪ್ರಥಮ ಆದ್ಯತೆ ನೀಡಲಾಗುವುದು. 


4. ಅರ್ಹ ವಿದ್ಯಾರ್ಹತೆ ಹೊಂದಿದ ಶೇಕಡಾ 60% ಮೀರದಂತೆ ಅಂಗವಿಕಲತೆ ಹೊಂದಿದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2 & 3 ರ ಪ್ರಕರಣಗಳನ್ನು ಹೊರತುಪಡಿಸಿದ, ಸ್ವೀಕೃತವಾಗಿರುವ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿ, ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವಂತಿಲ್ಲ. ಒಂದುವೇಳೆ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು. 


5. ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2,3 & 4ರ ಪ್ರಕರಣಗಳನ್ನು ಹೊರತುಪಡಿಸಿ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಇಲಾಖೆ ನಿಗಧಿಪಡಿಸಿದ ಮಾನದಂಡಗಳ ಪ್ರಕಾರ ಆಯ್ಕೆ ಮಾಡಲಾಗುವುದು.

Qualification:
* ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ.
Age Limit:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿರಬೇಕು. 
ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 45 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.