ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
17 ಜನವರಿ 2023
Others
ಜಿಲ್ಲಾಧಿಕಾರಿಗಳ ಕಾರ್ಯಾಲಯ, ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 120 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸ :
1. ಚಿತ್ರದುರ್ಗ ಜಿಲ್ಲೆಯ ನಗರಸಭೆ / ಪುರಸಭೆ/ ಪಟ್ಟಣ ಪಂಚಾಯಿತಿಗಳಲ್ಲಿ ಅರ್ಜಿಯನ್ನು ಪಡೆಯುವುದು
2. ಭರ್ತಿ ಮಾಡಿದ ಅರ್ಜಿಯನ್ನು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ ಇವರಿಗೆ ಸಲ್ಲಿಸುವುದು.
Job Overview
- No. of posts
- 120
- Start Date
- 12 ಜನವರಿ 2023
- End Date
- 13 ಫೆಬ್ರುವರಿ 2023
- Employment Type
- FULL_TIME
- Organization
- KPSC Vaani (Website)
- Location
- ಚಿತ್ರದುರ್ಗ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.