ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು89 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 22-02-2024 ಸಂಜೆ 5.30 ಗಂಟೆಯೊಳಗೆ ಅಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹಾಗೂ ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ಮಹಾನಗರಪಾಲಿಕೆಗಳಲ್ಲಿ ಹಾಲಿ ನೇರಪಾವತಿ/ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
ಸಾಮಾನ್ಯ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 200 ರೂ
SC, ST, Cat-1, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ : 100 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 /- ರಿಂದ 28,950 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ





Comments