Loading..!

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:7 ಮಾರ್ಚ್ 2025
not found

ಕೇಂದ್ರ ಮೀಸಲು ಪೊಲೀಸ್ ಪಡೆಯು (CRPF) 2025ನೇ ಸಾಲಿನ ಸಹಾಯಕ ಕಮಾಂಡಂಟ್ (ಜೆಡಿ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 76 ಹುದ್ದೆಗಳಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 21-03-2025ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಯ ಹೆಸರು : ಸಹಾಯಕ ಕಮಾಂಡಂಟ್ (GD)
ಹುದ್ದೆಗಳ ಸಂಖ್ಯೆ : 76


ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ : 
ಅರ್ಜಿ ಸಲ್ಲಿಸುವ ದಿನಾಂಕಕ್ಕೆ 35 ವರ್ಷಕ್ಕಿಂತ ಹೆಚ್ಚು ಇರಬಾರದು (02.08.1990ಕ್ಕಿಂತ ಮೊದಲು ಜನಿಸಿದವರಾಗಿರಬಾರದು). ವಯೋಮಿತಿಯಲ್ಲಿ ಸಡಿಲಿಕೆ ಸರ್ಕಾರದ ನಿಯಮಾವಳಿಗಳ ಪ್ರಕಾರ ಅನ್ವಯಿಸುತ್ತದೆ.


ಹುದ್ದೆಗಳ ವಿಭಾಗವು :
BSF  - 08            
CRPF - 55            
ITBPF -  02            
SSB  - 11            


ಅರ್ಜಿ ಸಲ್ಲಿಸುವ ವಿಧಾನ : 
ಅರ್ಜಿ ನಮೂನೆ ಮತ್ತು ಅಧಿಸೂಚನೆ crpf.gov.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಅಭ್ಯರ್ಥಿಗಳು ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ 21-03-2025ರೊಳಗೆ ಸೂಚಿಸಿದ ವಿಳಾಸಕ್ಕೆ ಕಳುಹಿಸಬೇಕು.


ಅಧಿಸೂಚನೆ ಮತ್ತು ಹೆಚ್ಚಿನ ಮಾಹಿತಿಗಾಗಿ : ಅಧಿಕೃತ ವೆಬ್‌ಸೈಟ್ crpf.gov.in


ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಿ ಮತ್ತು ಸೂಚಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. 

Comments

Ramesh Talavar ಮಾರ್ಚ್ 7, 2025, 4:15 ಅಪರಾಹ್ನ