ಕೇಂದ್ರ ರೇಷ್ಮೆ ಮಂಡಳಿ(CSB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ರೇಷ್ಮೆ ಮಂಡಳಿ(CSB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
27 ಆಗಸ್ಟ್ 2024 Others
Tags: PG

ಭಾರತ ಸರ್ಕಾರದ ಜವಳಿ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ 130 ಸೈಂಟಿಸ್ಟ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/09/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಆನ್ ಲೈನ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
130
Start Date
27 ಆಗಸ್ಟ್ 2024
End Date
5 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.  
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ,
* OBC ಅಭ್ಯರ್ಥಿಗಳಿಗೆ 3 ವರ್ಷ, 
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.