ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ 2023ರ ಅಧಿಸೂಚನೆ ಪ್ರಕಟಗೊಂಡಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ
ಕೇಂದ್ರ ಶಿಕ್ಷಣ ಮಂಡಳಿಯ ಯಾವುದೇ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆಯಲು ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಗೆ (CTET)ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 03-11-2023 ರಿಂದ 23-11-2023 ರೊಳಗೆ ಅರ್ಜಿ ಸಲ್ಲಿಸಬಹುದು.
* ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ 2023 ಕ್ಕೆ ನಿಗದಿಪಡಿಸಿದ ಪರೀಕ್ಷಾ ಶುಲ್ಕದ ವಿವರ ಈ ಕೆಳಗಿನಂತಿದೆ
ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ
- ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ 1000/-
- ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 1200/-
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ
- ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ 500/-
- ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 600/-
* ಪರೀಕ್ಷಯು ಜನೆವರಿ 21 2024 ರಂದು ನಡೆಯಲಿದೆ.
* ಈ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಸೂಚನೆಯಲ್ಲಿ ಈಗಾಗಲೇ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳತಕ್ಕದ್ದು.
Comments