ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಮಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಯಾವುದೇ ಪರೀಕ್ಷೆ ಇಲ್ಲ ನೇರ ಸಂದರ್ಶನ
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು ಇಲ್ಲಿ ಖಾಲಿ ಇರುವ 54 ಶೀಘ್ರ ಲಿಪಿಗಾರ, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರ ಮತ್ತು ಜವಾನ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶನೀಡಲಾಗಿದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 06/11/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/12/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 06/12/2023
ಹುದ್ದೆಗಳ ವಿವರ : 54
ಶೀಘ್ರ ಲಿಪಿಗಾರ : 10
ಬೆರಳಚ್ಚುಗಾರರು : 6
ಬೆರಳಚ್ಚು ನಕಲುಗಾರ : 2
ಜವಾನ : 36
- No. of posts
- 54
- Start Date
- 6 ನವೆಂಬರ್ 2023
- End Date
- 5 ಡಿಸೆಂಬರ್ 2023
- Last Payment
- 6 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ದಕ್ಷಿಣ ಕನ್ನಡ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ 1: 5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಜವಾನ ಹುದ್ದೆಗಳಿಗೆ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಈ ಕೆಳಗಿನಂತೆ ಹೊಂದಿರಬೇಕು.
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಜವಾನ ಹುದ್ದೆಗಳಿಗೆ - ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ರೂ. 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.