ದಾವಣಗೆರೆ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: PUC
Published by: Bhagya R K
|
ದಾವಣಗೆರೆ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 16 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಜುಲೈ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
16
Start Date
29 ಜೂನ್ 2024
End Date
20 ಜುಲೈ 2024
Employment Type
FULL_TIME
Organization
KPSC Vaani (Website)
Location
ದಾವಣಗೆರೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (PUC) ವಿದ್ಯಾರ್ಹತೆಯನ್ನು ಹಾಗೂ ಅಭ್ಯರ್ಥಿಗಳು ಸರ್ಟಿಫಿಕೇಷನ್ ಇನ್ ಲೈಬ್ರರಿ ಪ್ರಮಾಣ ಪತ್ರವನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 
ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ
ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ 200 ರೂ
ಎಲ್ಲಾ ವಿಧಗಳ ವಿಕಲಚೇತನ / ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

To Download Official Notification
Related Tags: PUC

Comments