Loading..!

ದಾವಣಗೆರೆ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Siddaram Halli
|
ದಾವಣಗೆರೆ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Davanagere Village Accountant Recruitment 2020: ದಾವಣಗೆರೆ ಜಿಲ್ಲಾ ಘಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಕಂದಾಯ ಘಟಕದಲ್ಲಿ ಪದೋನ್ನತಿಯಿಂದ ಅಥವಾ ವಯೋ ನಿವೃತ್ತಿಯಿಂದ ಖಾಲಿ ಉಳಿದಿರುವ ಸುಮಾರು 18 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 27 ಫೆಬ್ರುವರಿ 2020 ಕೊನೆಯ ದಿನಾಂಕವಾಗಿದೆ.
Job Overview
No. of posts
18
Start Date
29 ಜನವರಿ 2020
End Date
27 ಫೆಬ್ರುವರಿ 2020
Last Payment
29 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
KA,
Qualification:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಅಥವಾ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
* ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು
Fee:
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಇತರೆ ಎಲ್ಲ ಅಭ್ಯರ್ಥಿಗಳಿಗೆ 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1 : 40 ವರ್ಷ
* ಹಿಂದುಳಿದ ವರ್ಗ : 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
to download official notification
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments