ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಮತ್ತು  ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
31 ಮೇ 2024 Others
Tags: Degree

ಕರ್ನಾಟಕ ರಾಜ್ಯದ ದಾವಣಗೆರೆ, ಕೊಪ್ಪಳ, ಚಾಮರಾಜನಗರ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ಖಾಲಿ ಇರುವ ಅಥಿತಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಯನ್ನು ಸಲ್ಲಿಸಬಹುದಾಗಿರುತ್ತದೆ.

- ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2024-25 ನೇ ಸಾಲಿಗೆ ತಾಲೂಕಿನ ಕೊಂಡಜ್ಜಿಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪಿಸಿಎಂಬಿ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 5ರ ಒಳಗಾಗಿ ವಸತಿ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ' ಮೊ: 90088-15296/ 89701-59714ಕ್ಕೆ ಸಂಪರ್ಕಿಸಬಹುದು.

- ಕೊಪ್ಪಳ: ಕುಕನೂರು ತಾಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 4ರ ಒಳಗಾಗಿ ಕುಕನೂರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ವಸತಿ ಕಾಲೇಜಿನ ಕಚೇರಿಗೆ ಅರ್ಜಿ ಸಲ್ಲಿಸಬಹುದು.

- ಚಾಮರಾಜನಗರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುಂಡ್ಲುಪೇಟೆ ಪಟ್ಟಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಖಾಲಿ ಇರುವ ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಯ ಅತಿಥಿ ಉಪನ್ಯಾಸಕರ ನೇಮಕ ನಡೆಯಲಿದೆ. ಅರ್ಜಿಗಳನ್ನು ಗುಂಡ್ಲುಪೇಟೆ ಪಟ್ಟಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ದೂ.ಸಂ 9964346118) ಹಾಗೂ ಚಾಮರಾಜನಗರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ (ದೂ. ಸಂ 7022054512)ಯಲ್ಲಿ ಪಡೆದು ಸಂಪೂರ್ಣ ದಾಖಲೆಗಳೊಂದಿಗೆ ಜೂ. 8ರವರೆಗೆ ಸಲ್ಲಿಸಬಹುದು.

- ವಿಜಯನಗರ: ಹೊಸಪೇಟೆ ಅಲ್ಪಸಂಖ್ಯಾತರ ಸರಕಾರಿ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ. ಹೆಚ್ಚಿನ ಮಾಹಿತಿಗೆ ಮೊ.9964732718ಗೆ ಸಂಪರ್ಕಿಸಬಹುದು.

- ಬೀದರ್: ಜಿಲ್ಲೆಯ ಬೊಂಬಳಗಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪಿಯು ವಸತಿ ಶಾಲೆಯಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹಾಗೂ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಜೂ.10 ರೊಳಗಾಗಿ ಪ್ರಾಂಶು ಪಾಲರು, ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಬಂಬಳಗಿ, ಬೀದರ್‌ಗೆ ಸಲ್ಲಿಸಬಹುದು. ಮಾಹಿತಿಗಾಗಿ 7892188513ಗೆ ಸಂಪರ್ಕಿಸುವಂತೆ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Job Overview
Start Date
31 ಮೇ 2024
End Date
5 ಜೂನ್ 2024
Employment Type
FULL_TIME
Organization
KPSC Vaani (Website)
Location
KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎ, ಬಿಪಿಎಡ್, ಎಂ.ಎಸ್ಸಿ, ಬಿ.ಇಡಿ, ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆ ಹೊಂದಿರುವವರು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.  

 
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.