Loading..!

ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:31 ಮೇ 2024
not found

ಕರ್ನಾಟಕ ರಾಜ್ಯದ ಕೋಲಾರ, ಬೆಂಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಖಾಲಿ ಇರುವ ಅಥಿತಿ ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಯನ್ನು ಸಲ್ಲಿಸಬಹುದಾಗಿರುತ್ತದೆ.


- ಕೋಲಾರ ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ(ಸಿಬಿಎಸ್‌ಸಿ), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಸಾಮಾನ್ಯ ವಿಜ್ಞಾನ, ಗಣಿತ, ಸಮಾಜ ವಿಜ್ಞಾನ, ದೈಹಿಕ, ಗಣಕಯಂತ್ರ, ಆರ್ಟ್ ಅಂಡ್ ಕ್ರಾಪ್ಟ್ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿಗಳನ್ನು ಜೂನ್ 7 2024 ರೊಳಗೆ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಕೋಲಾರ ಟಮಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳನ್ನು ಭೇಟಿಯಾಗಬಹುದು.


- ಬೆಂಗಳೂರು ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೊಮ್ಮವಾರದ ರಸ್ತೆಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಶಿಕ್ಷಕ, ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಕನ್ನಡ ಭಾಷೆ, ಆಂಗ್ಲಭಾಷೆ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಉಪನ್ಯಾಸಕ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತರು 2024 ಜುಲೈ 1ರೊಳಗೆ ಸ್ವವಿವರದೊಂದಿಗೆ ಶಾಲೆಯ ಆಡಳಿತ ಮಂಡಳಿಗೆ ಸಂಪರ್ಕಿಸುವಂತೆ ಅಟಲ್ ಜಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


- ರಾಯಚೂರು ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಯರಮರಸ್ ಕ್ಯಾಂಪ್‌ನಲ್ಲಿ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, ಆಸಕ್ತರು ಅರ್ಜಿ ಅರ್ಜಿಗಳನ್ನು 2024 ಜೂ.4ರೊಳಗಾಗಿ ಸಲ್ಲಿಸಬಹುದಾಗಿದೆ.ಮಾಹಿತಿಗಾಗಿ: 9035888432/ 9845682370/ 9900494048/96634282157  ಸಂಪರ್ಕಿಸಿ.

Comments