ಹಾಸನ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Tags: SSLC
Published by: Yallamma G
|
ಹಾಸನ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾಸನ ಘಟಕದಲ್ಲಿ ಖಾಲಿ ಇರುವ 43 ಆದೇಶ-ಜಾರಿಕಾರರು ಮತ್ತು ಸೇವಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/10/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 43
* ಆದೇಶ-ಜಾರಿಕಾರರು : 11 
* ಸೇವಕರು : 32

Job Overview
No. of posts
43
Start Date
4 ಸೆಪ್ಟೆಂಬರ್ 2023
End Date
3 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಹಾಸನ ಜಿಲ್ಲಾ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆಮಾಡಿಕೊಳ್ಳಲಾಗುತ್ತದೆ.  
- ಆದೇಶ-ಜಾರಿಕರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1: 25 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
- ಸೇವಕ ಹುದ್ದೆಗಳಿಗೆ SSLC ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1: 10 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ-ಜಾರಿಕರ ಹುದ್ದೆಗಳಿಗೆ ಹುದ್ದೆಗಳಿಗೆ - SSLC(10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
* ಸೇವಕ ಹುದ್ದೆಗಳಿಗೆ : SSLC(10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು. 

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 200/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.