ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:15 ಆಗಸ್ಟ್ 2024

ಕರ್ನಾಟಕ ಸರಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿರುವ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ನಲ್ಲಿ ಖಾಲಿ ಇರುವ 338 ಶಿಶುಕ್ಷುಗಳ(ಅಪ್ರೆಂಟಿಸ್) ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಒಂದು ವರ್ಷದ ವರೆಗೆ ಉದ್ಯೋಗ ತರಬೇತಿ ನೀಡಲಿದ್ದು ಜೊತೆಗೆ ಸ್ಟೈಪೆಂಡ್ ಕೂಡ ಕೊಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 338
Comments