ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
15 ಜನವರಿ 2025 Others
Tags: Degree

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ 234 ಜೂನಿಯರ್ ಎಸ್ಎಕ್ಯುಟಿವ್ ಆಫೀಸರ್ಸ್ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
234
Start Date
15 ಜನವರಿ 2025
End Date
14 ಫೆಬ್ರುವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಗುಂಪು ಕಾರ್ಯ/ಗುಂಪು ಚರ್ಚೆ, ಕೌಶಲ್ಯ ಪರೀಕ್ಷೆ, ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 14 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 234
Junior Executive – ಮೆಕ್ಯಾನಿಕಲ್ - 130
Junior Executive – ಎಲೆಕ್ಟ್ರಿಕಲ್ - 65
Junior Executive – ಇನ್ಸ್ಟ್ರುಮೆಂಟೇಷನ್ - 37
Junior Executive – ಕೆಮಿಕಲ್ - 2

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭಾವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 1180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.