ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ (IBPS) ನಿಂದ 9500 ಕ್ಕೂ ಅಧಿಕ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ (IBPS) ನಿಂದ 9500 ಕ್ಕೂ ಅಧಿಕ ಹುದ್ದೆಗಳ ನೇಮಕಾತಿ |  ಈ ಕುರಿತು ಮಾಹಿತಿ ನಿಮಗಾಗಿ
Published by Yallamma G
27 ಜುಲೈ 2024 Others
Tags: Degree

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನ ದೇಶದ 43 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 9995 ಆಫೀಸ್ ಅಸಿಸ್ಟೆಂಟ್ ಮತ್ತು ಆಫಿಸ್ ಸ್ಕೇಲ್-1 ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಲೈನ್  ಮೂಲಕ ಅರ್ಜಿಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ. 07/06/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ. 27/06/2024 ಆಗಿದೆ.   

ಕರ್ನಾಟಕ ರಾಜ್ಯದ ಬಳ್ಳಾರಿಯಲ್ಲಿ ಪ್ರಧಾನ ಕಚೇರಿನ್ನು ಹೊಂದಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಧಾರವಾಡದಲ್ಲಿ ಮುಖ್ಯ ಕಚೇರಿ ಹೊಂದಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳಲ್ಲಿ ಒಟ್ಟು 586 ಆಫೀಸ್ ಅಸಿಸ್ಟೆಂಟ್ ಮತ್ತು ಆಫಿಸ್ ಸ್ಕೇಲ್-1 ಹುದ್ದೆಗಳು ನೇಮಕಾತಿಗೆ ಲಭ್ಯವಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 
ಕರ್ನಾಟಕ ಗ್ರಾಮೀಣ ಬ್ಯಾಂಕ್
- ಆಫೀಸ್ ಅಸಿಸ್ಟೆಂಟ್ಸ್ : 100
- ಆಫೀಸರ್ ಸ್ನೇಲ್ 1 : 286
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್
- ಆಫೀಸ್ ಅಸಿಸ್ಟೆಂಟ್ಸ್ : 100
- ಆಫೀಸರ್ ಸ್ಕೆಲ್ 1 : 100

- ಈ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 3-18 ವರೆಗೆ ಮತ್ತು ಮುಖ್ಯ ಪರೀಕ್ಷೆಯನ್ನು 29/09/2024 ರಂದು ನಡೆಸಲು ನಿರ್ಧರಿಸಲಾಗಿದೆ.  ಕರ್ನಾಟಕದಲ್ಲಿನ ಪರೀಕ್ಷಾ ಕೇಂದ್ರಗಳು ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈಗಿನಿಂದಲ್ಲೇ ಉತ್ತಮ ತಯಾರಿಯನ್ನು ಪ್ರಾರಂಭಿಸಿ ಯಶಸ್ವಿಯಾಗಿ.

ಹುದ್ದೆಗಳ ವಿವರ : 9995
1. Office Assistant (Multipurpose) : 5585
2. Officer Scale-I : 3499
3. Officer Scale-II (Agriculture Officer) : 70
4. Officer Scale-II (Law) : 30
5. Officer Scale-II (CA) : 60
6. Officer Scale-II (IT) : 94
7. Officer Scale-II (General Banking Officer) : 496
8. Officer Scale-II (Marketing Officer) : 11
9. Officer Scale-II (Treasury Manager) : 21
10. Officer Scale III : 129

Job Overview
No. of posts
9995
Start Date
7 ಜೂನ್ 2024
End Date
27 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.  
- ಸಾಮಾನ್ಯ ಮತ್ತು OBC ಅಭ್ಯರ್ಥಿಗಳು : Rs. 850/- ರೂ
- SC/ST/PwBD ಅಭ್ಯರ್ಥಿಗಳು : Rs. 175/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.  

Age Limit:

ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷವರ್ಷಗಳ ವಯೋಮಿತಿಯನ್ನು ಮೀರಿರಬಾರದು. 

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.