ಭಾರತೀಯ ಅಂಚೆ ಇಲಾಖೆಯಲ್ಲಿ 21,400 ಕ್ಕೂ ಅಧಿಕ GDS ಹುದ್ದೆಗಳ ಭರ್ಜರಿ ನೇಮಕಾತಿ, ಈ ಕುರಿತು ಮಾಹಿತಿ ನಿಮಗಾಗಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 21,413 ಗ್ರಾಮೀಣ ಡಾಕಾ ಸೇವಕ್ (ಬಿಪಿಎಂ ಹಾಗೂ ಎಬಿಪಿಎಂ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ 1135 ಹುದ್ದೆಗಳು ಖಾಲಿ ಇವೆ.
ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : ಫೆಬ್ರವರಿ 10, 2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: ಮಾರ್ಚ್ 3, 2025
- ತಿದ್ದುಪಡಿ ಪ್ರಾರಂಭ ದಿನಾಂಕ: ಮಾರ್ಚ್ 6, 2025
- ತಿದ್ದುಪಡಿ ಕೊನೆಯ ದಿನಾಂಕ: ಮಾರ್ಚ್ 8, 2025
ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌ನಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ: 18 ವರ್ಷ ಹಾಗೂ ಗರಿಷ್ಠ: 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
1. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST) ಅಭ್ಯರ್ಥಿಗಳಿಗೆ : 5 ವರ್ಷಗಳು
2. ಇತರೆ ಹಿಂದುಳಿದ ವರ್ಗಗಳು (OBC) ಅಭ್ಯರ್ಥಿಗಳಿಗೆ : 3 ವರ್ಷಗಳು
3. ಆರ್ಥಿಕವಾಗಿ ದುರ್ಬಲ ವಿಭಾಗಗಳು (EWS) ಯಾವುದೇ ವಿಶ್ರಾಂತಿ ಇಲ್ಲ
4. ವಿಕಲಾಂಗ ವ್ಯಕ್ತಿಗಳು (PwD) ಅಭ್ಯರ್ಥಿಗಳಿಗೆ : 10 ವರ್ಷಗಳು
5. ವಿಕಲಾಂಗ ವ್ಯಕ್ತಿಗಳು (PwD) + OBC ಅಭ್ಯರ್ಥಿಗಳಿಗೆ : 13 ವರ್ಷಗಳು
6. ಅಂಗವಿಕಲರು (PwD) + SC/ST ಅಭ್ಯರ್ಥಿಗಳಿಗೆ : 15 ವರ್ಷಗಳು
ಅರ್ಜಿ ಶುಲ್ಕ :
- ಸಾಮಾನ್ಯ ವರ್ಗ: ರೂ.100/-
- SC/ST/PWD/Female Candidates/Transwomen ಅಭ್ಯರ್ಥಿಗಳು: ಶುಲ್ಕವಿಲ್ಲ
ಆಯ್ಕೆ :
ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೇತನ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಈ ಕೆಳಗಿನಂತೆ ನಿಗದಿ ಪಡಿಸಲಾಗಿದೆ.
- ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ12,000/- ರಿಂದ 29,380/- ರೂ ವರೆಗೆ ಮಾಸಿಕ ವೇತನ ಇರಲಿದೆ.
- ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ 10,000/- ರಿಂದ 24,470/- ರೂ ವರೆಗೆ ವೇತನ ಇರಲಿದೆ.
ಅರ್ಜಿಸಲ್ಲಿಸುವ ಕ್ರಮಗಳು :
# ಅಧಿಕೃತ ವೆಬ್‌ಸೈಟ್ https://karnatakapost.gov.in/ ಗೆ ಭೇಟಿ ನೀಡಿ
# ನೀವು ಅರ್ಜಿ ಸಲ್ಲಿಸಲಿರುವ ಕರ್ನಾಟಕ ಅಂಚೆ ವೃತ್ತ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
# ಹಿರಿಯ ಎಂಜಿನಿಯರ್ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
# ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
# ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
# 03-03-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ indiapostgdsonline.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ಓದಿ.
Comments