ಭಾರತೀಯ ಸೇನೆಯಲ್ಲಿ ಖಾಲಿ ಅಗ್ನಿವೀರ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:22 ಫೆಬ್ರುವರಿ 2023
ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ 2023-24ನೇ ವರ್ಷದ ನೇಮಕಾತಿಗಾಗಿ, ಸೇನೆಯಲ್ಲಿ ಖಾಲಿ ಇರುವ ಅಗ್ನಿವೀರರ, ಜನರಲ್ ಡ್ಯೂಟಿ, ಟೆಕ್ನಿಕಲ್, ಕ್ಲರ್ಕ್ ಹಾಗೂ ಟ್ರೇಡ್ಸ್ ಮನ್ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 15 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
* ಮಂಗಳೂರು ನೇಮಕಾತಿ ಕಚೇರಿಯಲ್ಲಿ ಆನ್ ಲೈನ್ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ರಾಜ್ಯದಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
Comments