ಭಾರತೀಯ ಸೇನೆಯಲ್ಲಿ ಖಾಲಿ ಅಗ್ನಿವೀರ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ ಖಾಲಿ ಅಗ್ನಿವೀರ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Tajabi Pathan
20 ಫೆಬ್ರವರಿ 2023 Others
Tags: Degree PUC SSLC

ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ 2023-24ನೇ ವರ್ಷದ ನೇಮಕಾತಿಗಾಗಿ, ಸೇನೆಯಲ್ಲಿ ಖಾಲಿ ಇರುವ ಅಗ್ನಿವೀರರ, ಜನರಲ್ ಡ್ಯೂಟಿ, ಟೆಕ್ನಿಕಲ್, ಕ್ಲರ್ಕ್ ಹಾಗೂ ಟ್ರೇಡ್ಸ್ ಮನ್ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 15 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
* ಮಂಗಳೂರು ನೇಮಕಾತಿ ಕಚೇರಿಯಲ್ಲಿ ಆನ್ ಲೈನ್ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ರಾಜ್ಯದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

Job Overview
Start Date
20 ಫೆಬ್ರುವರಿ 2023
End Date
15 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 17 ವರ್ಷ 6 ತಿಂಗಳು ವಯಸ್ಸು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

To Download Official Notification
Related Tags: Degree PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.