ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನ ಮಾನವ ಸಂಪನ್ಮೂಲ ವಿಭಾಗದಲ್ಲಿ ಖಾಲಿ ಇರುವ 25 ಹೆಚ್ಚುವರಿ ಜನರಲ್ ಮ್ಯಾನೇಜರ್, ಉಪ ಪ್ರಧಾನ ವ್ಯವಸ್ಥಾಪಕರು, ಮುಖ್ಯ ವ್ಯವಸ್ಥಾಪಕ, ಮತ್ತು ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ29 ಜುಲೈ 2024ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ, ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 25
ಹೆಚ್ಚುವರಿ ಜನರಲ್ ಮ್ಯಾನೇಜರ್ - 9
ಉಪ ಪ್ರಧಾನ ವ್ಯವಸ್ಥಾಪಕರು - 5
ಮುಖ್ಯ ವ್ಯವಸ್ಥಾಪಕ - 5
ಮ್ಯಾನೇಜರ್ - 4
ಉಪ ವ್ಯವಸ್ಥಾಪಕ - 2
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ CA/ ICWA/ LLB/ BE/ B.Tech/ MBA/ MA ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 54 ವರ್ಷಗಳ ವಯಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD (UR) ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು 13,000/- ರೂ ಗಳಿಂದ 23,900/-ರೂಗಳವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.



Comments