ಬೆಂಗಳೂರು, ಬೆಳಗಾವಿ, ಕಲಬುರಗಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು, ಬೆಳಗಾವಿ, ಕಲಬುರಗಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Tajabi Pathan
14 ಜನವರಿ 2023 Others
Tags: PUC SSLC

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಖಾಲಿ ಇರುವ 7 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 31/01/2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :
ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ನ್ಯಾಯ ಆಡಳಿತಮಂಡಳಿ,

ಕಂದಾಯ ಭವನ, 7 ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು -560009 
(Registrar, K.S.A.T., 7th Floor, Kandaya Bhavana, K.G.Road, Bengaluru-560009) 

Job Overview
No. of posts
7
Start Date
14 ಜನವರಿ 2023
End Date
31 ಜನವರಿ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನಿಗದಿ ಪಡಿಸಿದ ಪರೀಕ್ಷೆಯಲ್ಲಿ ಆಡಿದ ಒಟ್ಟು ಶೇಕಡಾ ಅಂಕಗಳ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಸಮಿತಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ(10th), ಪಿ.ಯು.ಸಿ.(12th) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲಭಾಷಾ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ , ಕನ್ನಡ ಮತ್ತು ಆಂಗ್ಲಭಾಷಾ ಶೀಘ್ರಲಿಪಿ ಪ್ರೌಢದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 150 ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸತಕ್ಕದ್ದು. 
SC/ ST  ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರಲಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.