ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:30 ಎಪ್ರಿಲ್ 2022
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಕಂಪ್ಯೂಟರ್ ಆಪರೇಟರ್ ಹುದ್ದೆಗಳು ಸೇರಿದಂತೆ ಒಟ್ಟು 77 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/05/2022 ಸಂಜೆ 4 ಗಂಟೆಯೊಳಗೆ ಅಂಚೆಯ ಮೂಲಕ ಅಥವಾ ಖುದ್ದಾಗಿ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕು.
ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ : 77
* ಕನ್ನಡ ವರದಿಗಾರರು/ ಆಂಗ್ಲ ವರದಿಗಾರರು - 05
* ಶೀಘ್ರಲಿಪಿಗಾರರು - 02
* ಕಿರಿಯ ಸಹಾಯಕ - 13
* ಕಂಪ್ಯೂಟರ್ ಆಪರೇಟರ್ - 04
* ಬೆರಳಚ್ಚುಗಾರ - 04
* ಸ್ವಾಗತಕಾರರು - 01
* ಬಡಗಿ - 01
* ವಾಹನ ಚಾಲಕರು - 08
* ದಲಾಯತ್ - 37
* ಸ್ವೀಪರ್ - 02
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ : 5074, ಮೊದಲನೆ ಮಹಡಿ,
ವಿಧಾನ ಸೌಧ, ಬೆಂಗಳೂರು-560 001.
No. of posts: 77
Comments